ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.
ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ.
ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಹೇಳುವುದು ಸರಿಯಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ಬಿಜೆಪಿ ಹೇಳಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಭಾಷಣದ ವಿಡಿಯೋ ಎಡಿಟ್ ಮಾಡಿ, ತಮಗೆ ಬೇಕಾದಂತೆ ಜೋಡಿಸಿ ತಮ್ಮ ಚಾರಿತ್ರ್ಯವಧೆಗೆ ಬಿಜೆಪಿ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹಳೆಯ ಕುತಂತ್ರವನ್ನು ಮುಂದುವರೆಸಿದ್ದು, ನನ್ನ ಹೇಳಿಕೆಯನ್ನು ತಿರುಚಿದೆ. ಎಡಿಟ್ ಮಾಡಿದ ವಿಡಿಯೋ ಅಪ್ಲೋಡ್ ಮಾಡಿ ಚಾರಿತ್ರ್ಯವಧೆಗೆ ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಸೇನೆಗೆ ಸೇರುವ ಎಲ್ಲರೂ ಶ್ರೀಮಂತರಾಗಿರುವುದಿಲ್ಲ. ಎರಡು ಹೊತ್ತಿನ ಊಟಕ್ಕೂ ಪರದಾಡುವ ಅನೇಕ ಯುವಕರಿದ್ದಾರೆ. ಅಂತಹ ಅಮಾಯಕರ ಜೀವದೊಂದಿಗೆ ಪ್ರಧಾನಿ ಮೋದಿ ಚೆಲ್ಲಾಟವಾಡುತ್ತಿದ್ದಾರೆ.
ಮತಕ್ಕಾಗಿ ಸೈನಿಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ನಾನು ಹೇಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…