ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.
ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.
ನಂತರ ಬಸ್ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…