ಸುದ್ದಿ

12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

24

ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…