ಸುದ್ದಿ

ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

109

2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಏ. ರಂದು 11 ಮೊದಲ ಹಂತದ ಮತದಾನ ನಡೆಯಲಿದೆ. ಏಪ್ರಿಲ್18 ರಂದು 2 ನೇ ಹಂತದ ಮತದಾನ, ಏ. 23 ರಂದು 3 ನೇ ಹಂತದ ಮತದಾನ, ಏ.29 ರಂದು 4 ನೇ ಹಂತದ ಮತದಾನ, ಮೇ.6 ರಂದು 5ನೇ ಹಂತ ಮೇ.12 ರಂದು 6ನೇ ಹಂತ ಮೇ.19 ರಂದು 7 ನೇ ಹಂತದ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಏ.18, 23 ರಂದು ಚುನಾವಣೆ

ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ 2 ಹಂತದ ಚುನಾವಣೆ ನಡೆಯಲಿದ್ದು, ಏ.18 ಹಾಗೂ ಏ.23 ರಂದು 2 ಹಂತಗಳಲ್ಲಿ ತಲಾ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ