ಸುದ್ದಿ

ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

56

ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಆದರೆ, ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆ ತಗ್ಗಿಸಲಾಗಿದೆ.
ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿದ್ದು, ಜೂನ್ 1 ರಿಂದಲೇ ಜಾರಿಗೆ ಬಂದಿದೆ. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿದೆ. ಇದು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿದೆ.

14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ 771.50 ರು ಆಗಲಿದ್ದು, ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್(19 ಕೆಜಿ) ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 282.50 ರೂ.ಗೆ ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಈಗ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದು, ಬೆಲೆ ಏರಿಕೆ ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ