inspirational, ಕಾನೂನು

ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

115

ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ 27-08-2021 ರಂದು ನೊಂದ ಬಾಲಕಿಯ ಹೇಳಿಕೆಯ ಪಡೆದು, ಅದರ ಅನ್ವಯ ಮಾಲೂರು ಪೋಲೀಸ್ ಠಾಣಾಧಿಕಾರಿ ಸಿ.ಆರ್. 262/2021 ರಂತೆ ಕಲಂ 376 (2) (ಎನ್) ಐ.ಪಿ.ಸಿ. ಮತ್ತು ಪೋಕ್ಸೊ ಕಾಯ್ದೆ ಅಡಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ನಡೆಸಿದ ವೃತ್ತ ನಿರೀಕ್ಷಕರಾದ ಮಾರ್ಕೋಡಯ್ಯರವರು ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.


ಸ್ಪೆಷಲ್ ಸಿ. (ಪೋಕ್ಸೋ) 58/2021 ರ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ವಿಚಾರಣೆ ನಡೆಸಿದ್ದು, ಆರೋಪ ರುಜುವಾತಾದ ಹಿನ್ನಲೆ ಕಲಂ 376 ಐ.ಪಿ.ಸಿ. ಮತ್ತು 6 ಪೋಕ್ಸೊ ಕಾಯ್ದೆ ಅಡಿ 27-02-2023 ರಂದು ಆರೋಪಿಗೆ 20 ವರ್ಷ ಸಜೆ ಜೊತೆಗೆ ರೂ. 25,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ನೊಂದ ಬಾಲಕಿಗೆ ರೂ.5.00,000/- ಗಳನ್ನು ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದ್ದಾರೆ. ಸದರಿ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತ ಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.