ಸುದ್ದಿ, ಸ್ಪೂರ್ತಿ

ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

39

ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ ಕೆಲಸವನ್ನು ಬಿಟ್ಟು ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ಎತ್ತುವ ಕೆಲಸವನ್ನು ಮಾಡುತ್ತಿದ್ದಾರೆ.

ಗಂಗಾ ನದಿಯಲ್ಲಿ ಸ್ವಚ್ಛವಾಗಿಡಲು ಕೇಂದ್ರ ಸರ್ಕಾರ ‘ನಮಾಮಿ ಗಂಗೆ’ ಎಂಬ ಯೋಜನೆಯನ್ನು ಶುರು ಮಾಡಿತ್ತು. ಆದರೆ ಕಾಳಿಪದ ಅವರು ಈ ಯೋಜನೆಯ ಹೆಸರು ಕೂಡ ಕೇಳಿಲ್ಲ. ಆದರು ಸಹ ಅವರು ಗಂಗಾ ಮಲೀನವಾಗಬಾರದೆಂದು ಪ್ರತಿದಿನ ಕಸ ಎತ್ತುತ್ತಿದ್ದಾರೆ. ಕಾಳಿಪದ ಬೆಲ್ಡಂಗಾದ ಕಲಾಬೇರಿಯಾದಿಂದ ಕೆಲಸ ಶುರು ಮಾಡುತ್ತಾರೆ. ಅವರು ತಮ್ಮ ದೋಣಿಯಿಂದ ಅನೇಕ ಘಾಟ್‍ಗಳಿಗೆ ಹೋಗಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎತ್ತುತ್ತಿದ್ದಾರೆ. ಅವರ ಕೆಲಸ ಭಗೀರಥ ಸೇತುವೆ ಅಥವಾ ಬೆಹ್ರಾಂಪೋರ್‍ನ ಫರ್ಶ್‍ದಂಗಾ ಘಾಟ್‍ನಲ್ಲಿ ಕೊನೆ ಆಗುತ್ತೆ.

ನಾನು ಈಗ ಮೀನು ಹಿಡಿಯುವುದನ್ನು ಬಿಟ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಗಂಗಾ ನದಿಯಿಂದ ಎತ್ತುತ್ತಿದ್ದೇನೆ. ನನಗೆ ನಾನು ಮಾಡುವ ಕೆಲಸದ ಮೇಲೆ ಹೆಮ್ಮೆ ಇದೆ. ಸರ್ಕಾರ ಅಥವಾ ಯಾವುದೇ ಸರ್ಕಾರೇತರ ಸಂಸ್ಥೆ ಗಂಗಾ ನದಿ ಬಗ್ಗೆ ಕಾಳಜಿ ವಹಿಸುವುದಿಲ್ಲ. ಹಾಗಾಗಿ ನಾನು ಅನೇಕ ಘಾಟ್‍ಗಳಿಂದ ಕಸ ಎತ್ತುತ್ತಿದ್ದೇನೆ ಎಂದು ಕಾಳಪದ ತಿಳಿಸಿದ್ದಾರೆ. ನಾನು ಇತರೆ ಮೀನುಗಾರರಿಂದಿಗೆ ದೋಣಿಯಲ್ಲಿ ಹೋಗುತ್ತೇನೆ. ಬಳಿಕ ನಾನು ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತೇನೆ. ಪ್ರತಿದಿನ 5ರಿಂದ 6 ಗಂಟೆ ಕೆಲಸ ಮಾಡಿ 2 ಕ್ವಿಂಟಲ್ ಪ್ಲಾಸ್ಟಿಕ್ ಹೆಕ್ಕುತ್ತೇನೆ. ಬಳಿಕ ಇದನ್ನು ರಿಸೈಕಲ್‍ಗೆ ಕೊಟ್ಟು 2,400 ರೂ.ರಿಂದ 2,600 ರೂ.ವರಗೂ ಸಂಪಾದಿಸುತ್ತೇನೆ. ನಾನು ವಿದ್ಯಾಭ್ಯಾಸ ಮಾಡಿಲ್ಲ. ಆದರೆ ವಿದ್ಯಾಭ್ಯಾಸ ಮಾಡಿರುವ ಜನರನ್ನು ನಾನು ನೋಡುತ್ತೇನೆ. ಅವರು ಪ್ಲಾಸ್ಟಿಕ್ ಬಳಸಿ ಅದನ್ನು ಎಸೆಯುತ್ತಾರೆ ಎಂದು ಕಾಳಿಪದ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.