ಸುದ್ದಿ

ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

69

ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

Colorful Hindu wedding in India

ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು.

ಸ್ಥಳೀಯರು ಪ್ರಕಾರ ಅನಿಲ್ ಪೈಕ್ರಾ ಅವರ ಮೊದಲ ಪತ್ನಿ ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ತಾವೂ ಪ್ರೀತಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಮದುವೆಯಾಗಲು ನಿರ್ಧರಿಸಿದರು. ಈ ಮದುವೆಗೆ ಮೊದಲ ಪತ್ನಿ ಕೂಡ ಒಪ್ಪಿಗೆ ಸೂಚಿಸಿದ್ದರು. ಆದ್ದರಿಂದ ಅನಿಲ್ ರಜೆ ಮೇಲೆ ಗ್ರಾಮಕ್ಕೆ ಬಂದಾಗ ತನ್ನ ಪ್ರೇಯಸಿಯ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದರು. ಇದೀಗ ಸಂಪ್ರದಾಯದಂತೆ ಪ್ರೇಯಸಿಯ ಜೊತೆ ಪತ್ನಿಯನ್ನು ಮರು ಮದುವೆಯಾಗಿದ್ದಾರೆ ಎಂದು ಪತ್ರಕರ್ತ ರಾಜೇಶ್ ಪಾಂಡೆ ಅವರು ತಿಳಿಸಿದ್ದಾರೆ.

ಕಾನೂನಿನ ಪ್ರಕಾರ ಸರ್ಕಾರಿ ಕೆಲಸದಲ್ಲಿರುವವರು ಮೊದಲ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗಬಾರದು. ಸೇವಾ ನಿಯಮಗಳ ಪ್ರಕಾರ ಏಕಕಾಲಕ್ಕೆ ಇಬ್ಬರು ಮಹಿಳೆಯರನ್ನು ಮದುವೆಯಾಗುವಂತಿಲ್ಲ. ಈ ರೀತಿ ಮಾಡಿದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ. ಯಾವುದೇ ಜಾತಿ, ಧರ್ಮದ ಹೊರತಾಗಿ ಎಲ್ಲ ಸರ್ಕಾರಿ ನೌಕರರಿಗೂ ಈ ನಿಯಮ ಅನ್ವಯಿಸುತ್ತದೆ. ಆದರೆ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ಮೂಲಕ ಮುಂದೆ ಅವರಿಗೆ ಸಮಸ್ಯೆಯಾಗಲಿದೆ ಎಂದು ಸಿಆರ್ ಪಿಎಫ್ ವಕ್ತಾರ ಬಿಸಿ ಪತ್ರ ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಸ್ಪೂರ್ತಿ

    ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

    ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…