ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.
ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.
ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…