ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.
ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.
ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….