ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.
ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಮಹಾದೇವಿ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ ಮಾಡಿ ಜನಾನುರಾಗಿ ಕೆಲಸ ಆರಂಭಿಸಿದ್ದರು. 5 ನೇ ಏಪ್ರಿಲ್ 1966 ಜಂಗಮ ದೀಕ್ಷೆ ಪಡೆದ ಮಾತೆ ಮಹಾದೇವಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…