ಸುದ್ದಿ

ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

48

ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ.

ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು, ಸಂಯಮ ಕಡಿಮೆಯುಳ್ಳವರು, ಜೀವನದ ಉದ್ದೇಶವೇ ಕಳೆದುಕೊಂಡಿರುವಂತಾಗಿರುವವರು, ಸಾಮಾಜಿಕ ಒತ್ತಡವನ್ನು ನಿಯಂತ್ರಿಸುವ ಸಾಮರ್ಥ್ಯ ಕುಗ್ಗಿದವರು ಟೈಮ್ ಪಾಸ್, ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತಿರುತ್ತಾರೆ ಎಂಬುದನ್ನು ಸಂಶೋಧಕರು ಮನಗಂಡಿದ್ದಾರೆ.

ಹಾಗಂತ ಸ್ಮಾರ್ಟ್ ಫೋನ್ ಸಂಪೂರ್ಣ ಕೆಟ್ಟದ್ದೂ ಅಲ್ಲ ಸಂವಹನದ ಮಟ್ಟ ಅಂದರೆ ಕರೆ, ಸಂದೇಶ ರವಾನೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಸ್ಮಾರ್ಟ್ ಫೋನ್ ಗಳು ಮಾನಸಿಕ ಆರೋಗ್ಯಕ್ಕೆ ಸಕಾರಾತ್ಮಕವಾಗಿರಲಿದೆ ಎಂದು ಸಂಶೋಧಕರು ಹೇಳಿದ್ದಾರೆ.

ನೇರ ಸಂಪರ್ಕ ಹೊಂದುವುದಕ್ಕೆ ಸ್ಮಾರ್ಟ್ ಫೋನ್ ಗಳನ್ನು ಬಳಕೆ ಮಾಡುವುದು ಒಳ್ಳೆಯದು ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಏನು ಮಾಡುತ್ತಿದ್ದಾರೆ ಎಂಬುದನ್ನು ನಿಷ್ಕ್ರಿಯವಾಗಿ ಗಮನಿಸುತ್ತಾ ಕೂರುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೇಯದಲ್ಲ ಎಂಬುದು ಸಂಶೋಧಕರು ಕಂಡುಕೊಂಡಿರುವ ಅಂಶ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.