ಸುದ್ದಿ

ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

47

ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು

ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ.

ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ, 1.5 ರಿಂದ 2 ಲಕ್ಷವರೆಗೆ ದಂಡ ವಿಧಿಸಲಾಗುವುದು ಎಂದು ಹೊಸ ಕಾನೂನು ಜಾರಿಯಾಗಿದೆ.

ಯುವತಿಯರು ಮೊಬೈಲ್​​ನಲ್ಲಿ ಅಗನತ್ಯ ವಿಡಿಯೋಗಳನ್ನು ನೋಡುವ ಮೂಲಕ ಸಮಯ ವ್ಯರ್ಥ ಮಾಡಬಾರದೆಂದು ಹಾಗೂ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಗನಿಬೇನ್​​​ ಠಾಕೂರ್​​ ತಿಳಿಸಿದ್ದಾರೆ. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ