ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

107

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.