News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

21

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ