ಸುದ್ದಿ

50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

15

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. 

ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.

 ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3 ತಿಂಗಳುಗಳಲ್ಲಿ ಯುವಕರಿಗೆ ಉದ್ಯೋಗ ಭರ್ತಿ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಯುವಕರು ಹೆಚ್ಚಿನ ಮಟ್ಟದಲ್ಲಿ ಪಾಲ್ಗೊಂಡು ಅರ್ಹರು ಉದ್ಯೋಗ ಪಡೆಯಬೇಕು ಎಂದು ರಾಜ್ಯಪಾಲರು ಮನವಿ ಮಾಡಿಕೊಂಡರು. 

 ಆರ್ಟಿಕಲ್ 370 ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ಆಡಳಿತಕ್ಕೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಅಲ್ಲಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಅದಕ್ಕೂ ಮುನ್ನ ಮೋದಿ ಸರ್ಕಾರ ಉದ್ಯೋಗಕ್ಕೆ ಆಧ್ಯತೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ