inspirational, ಸುದ್ದಿ

ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

173

ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ.

ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡವರು. ಹೌದು, ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದಿರುವ ಅಜಯ್ ರಾಯ್‍ ಎಬಿವಿಪಿಯಿಂದ ಬಂದವರು.

ಹೋರಾಟದ ಮೂಲಕ ಗುರುತಿಸಿಕೊಂಡ ಇವರಿಗೆ 1996 ರಿಂದ 2007 ರವರೆಗೆ ಬಿಜೆಪಿ ಟಿಕೆಟ್‍ ಕೊಟ್ಟು ಶಾಸಕರನ್ನಾಗಿ ಮಾಡಿತ್ತು. ಆದ್ರೆ 2007 ರಲ್ಲಿ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಬೇಸರಗೊಂಡ ಅಜಯ್‍ ರಾಯ್‍ ಸಮಾಜವಾದಿ ಪಕ್ಷಕ್ಕೆ ಹಾರಿದ್ರು. ನಂತರ 2009 ರಲ್ಲಿ ಮುರುಳಿ ಮನೋಹರ್ ಜೋಷಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಬಳಿಕ 2012 ರಲ್ಲಿ ಎಸ್‍ಪಿ ಬಿಟ್ಟು ಕಾಂಗ್ರೆಸ್ ಸೇರಿದ್ರು. ಇದೀಗ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     413,692 total views,  2,014 views today

ಏನ್ ಸಮಾಚಾರ