ಸುದ್ದಿ

ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

73

ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ.

ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು.

ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆನ್ನಲಾಗಿದೆ. ಹೀಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ದೇವೇಗೌಡರ ಹಾದಿ ಸುಗಮವಾದಂತಾಗಿದೆ.

ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನವಾಗಿದ್ದ ಕಾರಣ ಮುದ್ದಹನುಮೇಗೌಡರನ್ನು ಭೇಟಿಯಾದ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್, ಮನವೊಲಿಕೆ ಬಳಿಕ ಮುದ್ದಹನುಮೇಗೌಡರ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಹೈಕಮಾಂಡ್ ಮಾತಿಗೆ ಮುದ್ದಹನುಮೇಗೌಡ ಮನ್ನಣೆ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮುದ್ದಹನುಮೇಗೌಡರು, ತಮ್ಮೊಂದಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ಕೂಡಾ ಮಾತನಾಡಿದ್ದು, ಜೊತೆಗೆ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಸಮಾಲೋಚನೆ ನಡೆಸಿದ್ದಾರೆ. ಹೀಗಾಗಿ ಈ ಎಲ್ಲ ವಿಷಯಗಳನ್ನು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಆ ಬಳಿಕ ನಾಮಪತ್ರ ಹಿಂಪಡೆಯುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಹುತೇಕ ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತವೆನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.