ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ.
ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು.
ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆನ್ನಲಾಗಿದೆ. ಹೀಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ದೇವೇಗೌಡರ ಹಾದಿ ಸುಗಮವಾದಂತಾಗಿದೆ.
ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನವಾಗಿದ್ದ ಕಾರಣ ಮುದ್ದಹನುಮೇಗೌಡರನ್ನು ಭೇಟಿಯಾದ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್, ಮನವೊಲಿಕೆ ಬಳಿಕ ಮುದ್ದಹನುಮೇಗೌಡರ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಹೈಕಮಾಂಡ್ ಮಾತಿಗೆ ಮುದ್ದಹನುಮೇಗೌಡ ಮನ್ನಣೆ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಮುದ್ದಹನುಮೇಗೌಡರು, ತಮ್ಮೊಂದಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ಕೂಡಾ ಮಾತನಾಡಿದ್ದು, ಜೊತೆಗೆ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಸಮಾಲೋಚನೆ ನಡೆಸಿದ್ದಾರೆ. ಹೀಗಾಗಿ ಈ ಎಲ್ಲ ವಿಷಯಗಳನ್ನು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಆ ಬಳಿಕ ನಾಮಪತ್ರ ಹಿಂಪಡೆಯುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಹುತೇಕ ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತವೆನ್ನಲಾಗಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…