ಸುದ್ದಿ

ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

79

ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಶತಾಬ್ದಿ ಆಸ್ಪತ್ರೆ, ಜೋಗೇಶ್ವರಿ ಆಸ್ಪತ್ರೆ, ಎಂ.ಡಬ್ಲೂ ದೇಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಶತಾಬ್ದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಮುಂಬೈ ನಗರದಲ್ಲಿ ದಶಕದಲ್ಲಿ ಅತಿ ಹೆಚ್ಚು ಮಳೆ ಬಿದ್ದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಇಂದು ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರೈಲ್ವೇ ಹಳಿಗಳ ಮೇಲೂ ನೀರು ನಿಂತಿರುವ ಕಾರಣಕ್ಕೆ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.ಮಳೆರಾಯನ ಅಬ್ಬರಕ್ಕೆ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂದಿದೆ. ಇಡೀ ಮುಂಬೈ ನಗರವೇ ಮಳೆಗೆ ಜಲಾವೃತವಾಗಿದ್ದು, ಹಲವೆಡೆ ಮನೆಗಳ ಒಳಗೆ ಕೂಡ ನೀರು ನುಗ್ಗಿದೆ. ಅಲ್ಲದೆ ಮಿತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನದಿ ನೀರು ಆಸುಪಾಸಿನ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಅಲ್ಲಿನ ಕಟ್ಟಡಗಳ ಕೆಳ ಮಹಡಿ ಸಂಪೂರ್ಣ ಜಲಾವೃತಗೊಳ್ಳುವ ಮಟ್ಟಿಗೆ ನೀರು ತುಂಬಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಉಪಯುಕ್ತ ಮಾಹಿತಿ

    ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

    ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…