ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ ದೂರ ಇರಲು ಗುಣೇಶ್ವರಿ ನಿರ್ಧರಿಸಿದ್ದಳು. ಆದರೆ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣ ಮಕ್ಕಳ ಭವಿಷ್ಯದ ಉದ್ದೇಶದಿಂದ ಪತಿಯ ಜೊತೆಗೆ ವಾಸವಾಗಿದ್ದಳು.
ಎಂದಿನಂತೆ ಮೇ 20ರಂದು ಮದ್ಯ ಸೇವಿಸಿ ಮನೆಗೆ ಬಂದಿದ್ದ ಮುಧಿರಾಯ್ ಪತ್ನಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಪತಿಯ ವರ್ತನೆ, ಕ್ರೂರತೆಯಿಂದ ಕೋಪಗೊಂಡ ಗುಣೇಶ್ವರಿ ಹಲ್ಲೆ ಮಾಡಿದ್ದಾಳೆ. ಬಳಿಕ ಪತಿಯ ರುಂಡವನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಬಂದಿದ್ದಳು ಎಂದು ಲಖಿಮ್ಪುರ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.ಮಂಡ್ಯದಲ್ಲಿ ಇಂತಹದ್ದೇ ಘಟನೆ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದಿತ್ತು. ತಾಯಿಯನ್ನು ಬೈದಿದ್ದಕ್ಕೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದ ಪಶುಪತಿ ತನ್ನ ಸ್ನೇಹಿತನ ರುಂಡ ಕತ್ತರಿಸಿದ್ದ. ಬಳಿಕ ಅದನ್ನು ಹಿಡಿದುಕೊಂಡು ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….