ಸುದ್ದಿ

ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

59

ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್‍ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.

ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ. 
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ. 
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .