ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ.
ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ ಕೂಡ ತಮ್ಮನ್ನು ಬಿಟ್ಟು ಹೋದರೆ ಎಂಬ ಭಯ ಅವರಿಗೆ ಎಂದು ವ್ಯಂಗ್ಯವಾಡಿದರು.
ಮೋದಿಯವರು ದಲಿತರ ಪರ ಟೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಅವರು ನಿಜವಾಗಿಯೂ ಹಿಂದುಳಿದ ಜಾತಿಗೆ ಸೇರಿದ ವ್ಯಕ್ತಿಯಾದರೆ ದಲಿತರು ಮತ್ತು ಹಿಂದುಳಿದ ವರ್ಗದವರು ಬಂಗಲೆಗಳು ಹೊಂದುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ. ಚುನಾವಣೆಯ ಲಾಭಕ್ಕಾಗಿ ತಮ್ಮ ಜಾತಿಯನ್ನು ಅವರು ದಿನಕ್ಕೊಮ್ಮೆ ಬದಲಾಯಿಸುತ್ತಿರುತ್ತಾರೆ ಎಂದರು.
ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ಮೈತ್ರಿಯನ್ನು ಮುರಿಯಲು ಮೋದಿಯವರು ಪ್ರಯತ್ನಿಸಿದ್ದರು. ಹಿಂದೆಲ್ಲಾ ನನ್ನನ್ನು ಬೆಹೆನ್ಜಿ ಎಂದು ಕರೆಯುತ್ತಿದ್ದವರು ನಂತರ ಮೈತ್ರಿ ಮುರಿಯುವುದಿಲ್ಲ ಎಂದು ಗೊತ್ತಾದ ಮೇಲೆ ನನ್ನನ್ನು ಬುವಾ ಎಂದು ಕರೆಯಲು ಆರಂಭಿಸಿದರು. ಅಖಿಲೇಶ್ ಯಾದವ್ ಸೇರಿದಂತೆ ದೇಶದ ಸಂಸ್ಕಾರವಂತರು ನನ್ನನ್ನು ಬೆಹೆನ್ಜಿ ಎಂದು ಕರೆಯುತ್ತಾರೆ, ನನ್ನ ಪೋಷಕರು ಕೂಡ ನನ್ನನ್ನು ಹಾಗೆಯೇ ಕರೆಯುತ್ತಾರೆ, ಆದರೆ ಮೋದಿಯವರ ಸಂಬೋಧನೆಯಿಂದಲೇ ಅವರು ಎಂತವರು ಎಂದು ಮನದಟ್ಟು ಮಾಡಿಕೊಳ್ಳಬಹುದು ಎಂದರು.
ಉತ್ತರ ಪ್ರದೇಶದಲ್ಲಿ ಕೊನೆಯ ಹಂತದ ಚುನಾವಣೆಯಲ್ಲಿ ಮತದಾರರು ಬಿಎಸ್ಪಿ-ಎಸ್ಪಿ ಮೈತ್ರಿಪಕ್ಷಗಳಿಗೆ ಮತ ಹಾಕುವಂತೆ ಕೋರಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..