modi, ಉಪಯುಕ್ತ ಮಾಹಿತಿ

ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

212

ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. 

ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ ಪರಿಸರ ರಕ್ಷಣೆಗೆ ಸಹಕರಿಸುವಂತೆ ಸ್ವಾತಂತ್ರ್ಯದಿನದ ಭಾಷಣದಲ್ಲಿ ಕರೆ ನೀಡಿದ್ದ ಪ್ರಧಾನಿ, ಆಗಸ್ಟ್‌ ತಿಂಗಳ ಮನ್‌ಕಿ ಬಾತ್‌ನಲ್ಲಿ ಪ್ಲಾಸ್ಟಿಕ್‌ ವಿರುದ್ಧ ಸಮರವನ್ನೇ ಸಾರಿದ್ದಾರೆ. 

ಸೆ.11ರಿಂದ ‘ಸ್ವಚ್ಛತಾ ಹೀ ಸೇವಾ’ 
ಸ್ವಚ್ಛತೆಯನ್ನು ಸೇವೆ ಎಂದು ಪರಿಗಣಿಸಬೇಕೆಂದು ಮನವಿ ಮಾಡಿ ಪ್ರತಿ ವರ್ಷ ನಡೆಸಲಾಗುವ ಸ್ವಚ್ಛತಾ ಹೀ ಸೇನಾ ಕಾರ್ಯಕ್ರಮ ಈ ವರ್ಷ ಸೆಪ್ಟೆಂಬರ್‌ 11ರಿಂದ ಆರಂಭವಾಗಲಿದೆ ಎಂದು ಮೋದಿ ಹೇಳಿದರು. 
ಪ್ಲಾಸ್ಟಿಕ್‌ ಮುಕ್ತ ಭಾರತ ಮಾತೆ 

-ಭಾರತ ಮಾತೆಯನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸುವ ಪ್ರತಿಜ್ಞೆಯೊಂದಿಗೆ ಎಲ್ಲರೂ ಈ ಬಾರಿ ಗಾಂಧಿ ಜಯಂತಿ ಆಚರಿಸಬೇಕು. 
– ಎಲ್ಲಾ ನಗರಾಡಳಿತ ಮತ್ತು ಜಿಲ್ಲಾಡಳಿತಗಳು, ಪಂಚಾಯಿತಿಗಳು, ಸರಕಾರ ಮತ್ತು ಸರಕಾರೇತರ ಸಂಘಟನೆಗಳು ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಮತ್ತು ಶೇಖರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. 
– ಸಂಗ್ರಹಿಸಲಾದ ಪ್ಲಾಸ್ಟಿಕ್‌ನ್ನು ಮರುಬಳಕೆ ಮಾಡುವ, ಇಂಧನವಾಗಿ ಪರಿವರ್ತಿಸುವ ಸಾಧ್ಯತೆಗಳ ಬಗ್ಗೆ ಕಾರ್ಪೊರೇಟ್‌ ವಲಯ ಆವಿಷ್ಕಾರ ಮಾಡಬೇಕು. 


ದೀಪಾವಳಿ ಡೆಡ್‌ಲೈನ್‌ 

ಪ್ಲಾಸ್ಟಿಕ್‌ ತ್ಯಾಜ್ಯದ ಸುರಕ್ಷಿತ ವಿಲೇವಾರಿಗೆ ಅಕ್ಟೋಬರ್‌ 27ರ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಹುಡುಕುವಂತೆ ಅವರು ಮನವಿ ಮಾಡಿದ್ದಾರೆ. 
ಜನ, ವರ್ತಕರುಏನು ಮಾಡಬಹುದು? 
* ಪ್ಲಾಸ್ಟಿಕ್‌ ಚೀಲಗಳನ್ನು ಬಳಸಿ ಎಸೆಯುವ ಅಭ್ಯಾಸ ಬಿಟ್ಟು ಬಿಡಿ 
* ಅಂಗಡಿಗೆ ಹೋಗುವಾಗ ಬಟ್ಟೆ ಚೀಲ ಒಯ್ಯುವುದನ್ನು ಮರೀಬೇಡಿ 
* ಗ್ರಾಹಕರು ತಾವೇ ಚೀಲ ತರಬೇಕೆಂದು ಅಂಗಡಿಗಳಲ್ಲಿ ಬೋರ್ಡ್‌ ಹಾಕಬಹುದು. 
* ಅಂಗಡಿಗಳಲ್ಲೇ ಬಟ್ಟೆ,, ಪೇಪರ್‌ ಚೀಲ ಒದಗಿಸುವ ವ್ಯವಸ್ಥೆ ಮಾಡಬಹುದು. 

ಪ್ಲಾಸ್ಟಿಕ್‌ ಸಮಸ್ಯೆಯಅಗಾಧತೆ 
25,940 ಟನ್‌
ದೇಶದಲ್ಲಿ ಪ್ರತಿದಿನ ಸಂಗ್ರಹವಾಗುವ ಪ್ಲಾಸ್ಟಿಕ್‌ ತ್ಯಾಜ್ಯ 
ಇದು 9,000 ಏಷ್ಯನ್‌ ಆನೆಗಳ ತೂಕಕ್ಕಿಂತಲೂ ಹೆಚ್ಚು! 
 10,376ಟನ್‌ ಪ್ರತಿದಿನಸಂಗ್ರಹಿಸಲಾಗದೆಉಳಿಯುವಪ್ಲಾಸ್ಟಿಕ್‌ 
ದಿಲ್ಲಿ, ಮುಂಬಯಿ, ಬೆಂಗಳೂರು, ಚೆನ್ನೈ, ಕೋಲ್ಕೊತಾ 
ಅತಿ ಹೆಚ್ಚು ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ನಡೆಯುವ ನಗರಗಳು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…