ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.
1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.
ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.
ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.
ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.