ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.
ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…