ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ.
ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ.
ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ. ಮಂಡ್ಯದಲ್ಲಿ ಇಂದು ಜೆಡಿಎಸ್ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.
ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್ ಹೆಸರನ್ನು ಪ್ರಕಟಿಸಿದ್ದಾರೆ.
ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…