Motivation

ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

156

ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

‘ॐ ‘ ಮತ್ತು ಥೈರಾಯ್ಡ್‌:
‘ಓಂ’ ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್‌ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ.
‘ॐ ‘ ಮತ್ತು ಭಯ :
ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂಡು ‘ಓಂ’ ಎಂದು ಉಚ್ಛರಿಸಿ.
‘ॐ ‘ ಮತ್ತು ಒತ್ತಡ :
ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ.
‘ॐ ‘ ಮತ್ತು ರಕ್ತ ಸಂಚಾರ :
ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ‘ಓಂ’ ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ.
‘ॐ ‘ ಮತ್ತು ಪಚನ ಕ್ರಿಯೆ :
ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ.
‘ॐ ‘ ಮತ್ತು ಸ್ಫೂರ್ತಿ :
ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫೂರ್ತಿ ಹರಿದಾಡುತ್ತದೆ.
‘ॐ ‘ ಮತ್ತು ಸುಸ್ತು :
ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ‘ಓಂ’ ಉಚ್ಛಾರ ಮಾಡುವುದು.
‘ॐ ‘ ಮತ್ತು ನಿದ್ರೆ :
ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ.
‘ॐ ‘ ಮತ್ತು ಶ್ವಾಸಕೋಶ :
‘ಓಂ’ ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ.
‘ॐ ‘ ಮತ್ತು ಬೆನ್ನೆಲುಬು :
‘ಓಂ’ ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ..
(ಸತ್ಸಂಗ ಸಂಗ್ರಹ)

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.