ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ.
ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ ಪಾಕ್ ಪ್ರಧಾನಿ ಅವರು ಕಾಶ್ಮೀರದ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದಾಗ, ಕಾಶ್ಮೀರದ ಸ್ಥಾನಮಾನವನ್ನು ಬದಲಾಯಿಸುವುದು ಕಾನೂನುಬಾಹಿರ, ಅಕ್ರಮ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ. ಭಾರತದ ಈ ನಡೆಯು ಪರಮಾಣು ಸಾಮರ್ಥ್ಯವುಳ್ಳ ನೆರೆ ರಾಷ್ಟ್ರಗಳ ಜೊತೆಗಿರುವ ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ ಎಂದು ಹೇಳಿದ್ದರು ಎನ್ನಲಾಗಿದೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರವನ್ನು ವಿವಾದಗ್ರಸ್ತ ಪ್ರದೇಶ ಎಂದು ಗುರುತಿಸಲಾಗಿದೆ. ಆದ್ದರಿಂದ ಈ ವಿಷಯದಲ್ಲಿ ಭಾರತ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಳ್ಳುವುದು ಸರಿಯಲ್ಲ. ಕಣಿವೆ ರಾಜ್ಯ ಹಾಗೂ ಪಾಕಿಸ್ತಾನದ ಜನ ಇದನ್ನು ಒಪ್ಪುವುದಿಲ್ಲ ಎಂದು ಪಾಕ್ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಪಾಕ್ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮೊದಲೇ ಅರಿತ್ತಿದ್ದ ಭಾರತವು ರಾಜ್ಯಸಭೆಯಲ್ಲಿ ಘೋಷಣೆಯಾಗುತ್ತಿದ್ದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಬ್ರಿಟನ್, ರಷ್ಯಾ, ಫ್ರಾನ್ಸ್, ಜರ್ಮನಿಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಪರಿಚ್ಛೇಧ 370, 35ಎ ರದ್ದು ಮಾಡುವ ಬಗ್ಗೆ ಮಾಹಿತಿ ನೀಡಿತ್ತು.ಭಾರತ ಜಮ್ಮು-ಕಾಶ್ಮೀರದ ಮೇಲೆ ತೆಗೆದುಕೊಂಡಿರುವ ಕ್ರಮದಿಂದ ಪಾಕಿಸ್ತಾನ ಕೆಂಗೆಟ್ಟಿದ್ದು, ಪಾಕ್ ಅಧ್ಯಕ್ಷ ಆರೀಫ್ ಅಲ್ವಿ ಅವರು ಮಂಗಳವಾರ ದಿಢೀರ್ ಸಂಸತ್ತಿನ ಜಂಟಿ ಅಧಿವೇಶನ ಕರೆದಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.