ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

27

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…