ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.

ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ. ಅದೇ ಹೆಣ್ಣಿನಿಂದ ಜನ್ಮ ತಾಳುತ್ತೇವೆ. ಆದರೆ ಅದೇ ಹೆಣ್ಣನ್ನು ಪೂಜೆಯಿಂದ ಹೊರಗಿಡೋದು ಅಂದ್ರೆ ಏನರ್ಥ ಎಂದು ಪ್ರಶ್ನಿಸಿದರು. ಹೆಣ್ಣು ಮಕ್ಕಳ ಪ್ರಾರ್ಥನೆಗೆ ಅವಕಾಶ ಕೊಡದೇ ಇದ್ದರೇ ಅದು ನನ್ನ ಪಾಲಿಗೆ ಧರ್ಮವೇ ಅಲ್ಲ ಅಂತಾ ಕಿಡಿಕಾರಿದ್ದಾರೆ.

ಇಂದು ಶಬರಿ ಮಲೈ ದೇಗುಲ ತೆರೆಯಲಿದ್ದು ಮಂಗಳವಾರ ರಾತ್ರಿ ಮತ್ತೆ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ. ಹೀಗಾಗಿ ಕಡಿಮೆ ಅವಧಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿಲಿದ್ದಾರೆ.
ಇದೆರೆಲ್ಲದರ ನಡುವೆ ವಿವಾಧತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರೈ ಯಾವ ಭಕ್ತರು ಸ್ತ್ರಿಯರನ್ನು ದೇವರ ದರ್ಶನಕ್ಕೆ ಅವಕಾಶ ಕೊಡುವುದಿಲ್ಲವೋ ಅವರು ಭಕ್ತರೇ ಇಲ್ಲ. ಯಾವ ದೇವರು ಮಹಿಳೆಯನ್ನು ನೋಡೋದಿಲ್ಲವೋ ಅದು ದೇವರೇ ಅಲ್ಲ. ಮಹಿಳೆಯರಿಗೆ ಕೇರಳ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿ ಕೊಡಲೇಬೇಕು. ಮಹಿಳೆಯರನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಅಂತಾ ಪ್ರಕಾಶ್ ರೈ ಹೇಳಿದ್ದಾರೆ.