ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ.
ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ.
ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಪಕ್ಷಕ್ಕಾಗಿ ಎಲ್ಲರೂ ರಾಜೀನಾಮೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ಪಕ್ಷಕ್ಕಾಗಿ ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷದ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪಕ್ಷ ರಾಜೀನಾಮೆ ನೀಡಬೇಕೆಂದು ಹೇಳಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇವೆ. ಪಾರ್ಟಿಯ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಇದೂವರೆಗೂ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಒಂದು ವೇಳೆ ಮುಂಬೈಗೆ ತೆರಳುವಂತೆ ಸೂಚಿಸಿದ್ರೆ ಹೋಗುತ್ತೇನೆ. ಇದೂವರೆಗೂ ಆ ರೀತಿಯ ಆದೇಶ ನನಗೆ ತಲುಪಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ಮನವೊಲಿಕೆಗೆ ಸಿದ್ಧ ಎಂಬ ಸಂದೇಶವನ್ನು ಪರೋಕ್ಷವಾಗಿ ಹೇಳಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.