ಸುದ್ದಿ

ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

88

ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ  ಸಮೇತರಾಗಿ ಕೇರಳ ಮತ್ತು ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಪ್ರವಾಸದಿಂದ ವಾಪಾಸ್ ಬರುವಾಗ ರಾತ್ರಿ ಸಮಯವಾಗಿದ್ದರಿಂದ ವಾಹನದಲ್ಲಿ ಪೋಷಕರು ನಿದ್ರೆಗೆ ಜಾರಿದ್ದರು. ಟಿಟಿ ವಾಹನದ ಹಿಂದಿನ ಡೋರ್ ಆಕಸ್ಮಿಕವಾಗಿ ತೆರೆದಿದ್ದರಿಂದ ಮಗು ಆಗುಂಬೆ ತಿರುವಿನ ಏಳನೇಯ ಕ್ರಾಸ್‍ನಲ್ಲಿ ಹೊರಗೆ ಬಿದ್ದಿದೆ. ಆದರೆ ವಾಹನದಲ್ಲಿ 8-10 ಮಂದಿ ಇದ್ದರೂ ಎಲ್ಲರೂ ಸಹ ನಿದ್ರೆಯಲ್ಲಿದ್ದರಿಂದ ಮಗು ಬಿದ್ದಿರುವುದು ತಿಳಿಯದೇ ಮುಂದೆ ತೆರಳಿದ್ದಾರೆ.

ಎನ್.ಆರ್ ಪುರ ಹೋಗುವಾಗ ಮಾರ್ಗ ಮಧ್ಯೆ ಕೊಪ್ಪ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡ ಪೋಷಕರು ತಮ್ಮ ಮಗು ವಾಹನದಲ್ಲಿ ತಮ್ಮ ಜೊತೆ ಇಲ್ಲದಿರುವುದನ್ನು ಗಮನಿಸಿ ಗಾಬರಿಗೊಂಡು ತಕ್ಷಣ ಅದೇ ಮಾರ್ಗವಾಗಿ ಕಾರು ತಿರುಗಿಸಿಕೊಂಡು ಮಗುವನ್ನು ಹುಡುಕುತ್ತಾ ವಾಪಸ್ ಬಂದಿದ್ದಾರೆ. ಬರುವಾಗ ಆಗುಂಬೆ ಫಾರೆಸ್ಟ್ ಗೇಟ್‍ನಲ್ಲಿ ಮಗು ಠಾಣೆಯಲ್ಲಿ ಇರುವ ವಿಷಯ ಗೊತ್ತಾಗಿದೆ. ತಮ್ಮ ಮಗು ಠಾಣೆಯಲ್ಲಿರುವ ವಿಷಯ ತಿಳಿದ ಪೋಷಕರು ಠಾಣೆಗೆ ತೆರಳಿದ್ದಾರೆ. ಪೊಲೀಸರು ತಂದೆ-ತಾಯಿಗೆ ಎಚ್ಚರಿಕೆ ನೀಡಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕನ್ನಡ ಡಿಜಿಟಲ್ ಗ್ರಂಥ ಭಂಡಾರ.ನಿಮ್ಗೆ ಬೇಕಾದ ಮಾಹಿತಿಗಾಗಿ ಈ ಲೇಖನಿ ಓದಿ…

    ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….