ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು.
ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.
ಅಮಾನತಿನ ಬಳಿಕ ಮೊಹ್ಸಿನ್ ಚುನಾವಣೆ ಸಂದರ್ಭದಲ್ಲಿ ಎಲ್ಲರ ವಾಹನವನ್ನೂ ತಪಾಸಣೆ ಮಾಡಬೇಕಾಗುತ್ತದೆ ಎಂದು ತಮ್ಮ ಕೆಲಸವನ್ನು ಸಮರ್ಥಿಸಿಕೊಂಡಿದ್ದರು. ಕೆಲ ದಿನಗಳ ನಂತರ ಅವರನ್ನು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಯ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.
ಮೊಹ್ಸಿನ್ ಅವರನ್ನು ಅಮಾನತುಗೊಳಿಸಿದ್ದ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊಹ್ಸಿನ್ ಅವರು ಕೆಲಸದಲ್ಲಿ ಮುಂದುವರಿಯಬಹುದು. ಅವರ ಮೇಲೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಎಸ್ಪಿಜಿ ಭದ್ರತೆಯಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರು ಏನು ಬೇಕಾದರೂ ಮಾಡಬಹುದು ಎಂದು ಅರ್ಥವಲ್ಲ ಎಂದು ಹೇಳಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….