ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇಯ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಈ ಮೊದಲು ಅಮೇರಿಕಾ, ಚೀನಾ ಹಾಗೂ ರಷ್ಯಾ ಬಳಿ ಮಾತ್ರವೇ ಈ ಸಾಮರ್ಥ್ಯವಿತ್ತು. ಭಾರತ ಕೂಡ ಲೋ ಆರ್ಬಿಟ್ ಸ್ಯಾಟಲೈಟ್ಗಳನ್ನ ಅಂತರೀಕ್ಷದಲ್ಲೇ ಹೊಡೆದುರುಳಿಸುವ ಕ್ಷಿಪಣಿ ಬಗ್ಗೆ ಹಲವು ವರ್ಷಗಳಿಂದ ಪರೀಕ್ಷೆ ನಡೆಸ್ತಾ ಇತ್ತು. ಇದಕ್ಕಾಗಿಯೇ ಶಕ್ತಿ ಮಿಷನ್ ಅನ್ನೋ ಯೋಜನೆ ಕೈಗೊಂಡಿತ್ತು. ಇದೀಗ ಮಿಷನ್ ಸಕ್ಸಸ್ ಆಗಿದೆ.
ಶಕ್ತಿ ಮಿಷನ್ ಒಂದು ಶತ್ರು ರಾಷ್ಟ್ರಗಳ ಸ್ಯಾಟಲೈಟ್ ಪ್ರತಿರೋಧಕ ತಂತ್ರಜ್ಞಾನವಾಗಿದ್ದು, ಈ ಕ್ಷಿಪಣಿಗಳು ಶತ್ರು ರಾಷ್ಟ್ರದ ಉಪಗ್ರಹಗಳನ್ನ ಅಂತರೀಕ್ಷದಲ್ಲೇ ಹೊಡೆದು ಹಾಕಬಲ್ಲವು. ಇವತ್ತು ನಡೆದ ಆಪರೇಷನ್ನಲ್ಲಿ ಮೂರೇ ನಿಮಿಷದಲ್ಲಿ ಶಕ್ತಿ ಮಿಷನ್ ಯಶಸ್ವಿಯಾಗಿದೆ. ಇದರಿಂದ ದೇಶದ ಗೌರವ ಹೆಚ್ಚಾಗಿದೆ. ಪ್ರಯೋಗಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಶತ್ರು ರಾಷ್ಟ್ರಗಳ ಉಪಗ್ರಹವನ್ನು ಭಾರತ ಬಾಹ್ಯಾಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯವನ್ನು ಪಡೆದಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…