ಕಾನೂನು

ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

108

ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಕಾಮಸಮುದ್ರಂ ಪೋಲೀಸ್ ಠಾಣಾಧಿಕಾರಿ ಸಿ.ಆರ್. 19/2022 ರಂತೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕ್ಸ್ ಕಾಯ್ದೆ ರೀತಿ ಪರ‍್ಯಾದಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಕೈಗೊಂಡು ಜೆ. ಎನ್. ಆನಂದ್ ಕುಮಾರ್, ವೃತ್ತ ನಿರೀಕ್ಷಕರು, ಕಾಮಸಮುದ್ರಂ ವೃತ್ತ ರವರು ಆರೋಪಿತರ ವಿರುದ್ಧ ದೋಷಾರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.

A1  ANAND                                                 A2  KANTHARAJ

A3    PRAVEEN                                              A4  VENU
ಸ್ಪೆಷಲ್ ಸಿ. (ಪೋಕ್ಸ್) 36/2022 ರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಬಿ. ಪಿ. ದೇವಮಾನೆ ಯವರು ವಿಚಾರಣೆ ನಡೆಸಿದ್ದು, ಸದರಿ ಪ್ರಕರಣದಲ್ಲಿ ವಾದ ವಿವಾದಗಳನ್ನು ಆಲಿಸಿದ ನಂತರ ಆರೋಪಿತರಾದ ಎ1 ಆನಂದ್, ಎ2 ಕಾಂತ್‌ರಾಜ್, ಎ3 ಪ್ರವೀಣ್ ಮತ್ತು ಎ4 ವೇಣು ರವರ ವಿರುದ್ಧ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ದಿನಾಂಕ 17-02-2023 ರಂದು ಆರೋಪಿತರಿಗೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕೋ ಕಾಯ್ದೆ ಆಡಿಯಲ್ಲಿ ಜೀವಿತಾವಧಿವರೆಗೂ ಸಜೆ, ಜೊತೆಗೆ ತಲಾ ರೂ. 25,000/- ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ತೀರ್ಪು ಪ್ರಕಟಿಸಿದೆ. ಸದರೀ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…