ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.
15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.
ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು