ಸುದ್ದಿ

ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

22

 

ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು.

ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಆ.21 ರಂದು ಕ್ಯಾತಸಂದ್ರ ವ್ಯಾಪ್ತಿಯ ಹಿರೇಗಹಳ್ಳಿ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿರುವ ಸಿಂಗೋನಹಳ್ಳಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬೈಕನ್ನು ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿ ಕ್ಯಾತಸಂದ್ರ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.

ಈತನಿಂದ 5 ಲಕ್ಷ ರೂ. ಮೌಲ್ಯದ 14 ಮೋಟಾರ್‍ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. 2016ರಲ್ಲಿ ಗೌರಿಬಿದನೂರು ಪೊಲೀಸರು ಈತನನ್ನು ಬಂಧಿಸಿ 18 ಬೈಕ್‍ಗಳನ್ನು ವಶಪಡಿಸಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.ಆರೋಪಿ ವಿರುದ್ಧ ಗೌರಿಬಿದನೂರು, ದೊಡ್ಡಬಳ್ಳಾಪುರ, ಯಲಹಂಕ ಠಾಣೆಗಳಲ್ಲೂ ಸಹ ಕಳವು ಪ್ರಕರಣಗಳು ದಾಖಲಾಗಿವೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಹೆಚ್ಚುವರಿ ಎಸ್‍ಪಿ ಡಾ.ಶೋಭಾರಾಣಿ ಮಾರ್ಗದರ್ಶನದಲ್ಲಿ ನಗರ ಉಪವಿಭಾಗದ ಪೊಲೀಸ್ ಉಪಅಧೀಕ್ಷಕ ತಿಪ್ಪೇಸ್ವಾಮಿ, ಕ್ಯಾತಸಂದ್ರ ವೃತ್ತನಿರೀಕ್ಷಕರಾದ ಶ್ರೀಧರ್ ನೇತೃತ್ವದಲ್ಲಿ ಪಿಎಸ್‍ಐ ರಾಜು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿಕೃಷ್ಣ ಆಭಿನಂದಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…