ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.
ಪುನೀತ್ ರಾಜ್‍ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…