ಸಿನಿಮಾ

ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

65

ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ.

ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ ಹಿನ್ನೆಲೆ ಪುನೀತ್ ರಾಜ್‍ಕುಮಾರ್ ಅವರು ಈ ಪತ್ರವನ್ನು ಬರೆದಿದ್ದಾರೆ. ಆ ಮೂಲಕ ನನ್ನ ಹೆಸರನ್ನು ಚುನಾವಣೆಗೆ, ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಪತ್ರದಲ್ಲಿ ಸ್ಪಷ್ಟನೆ ನೀಡಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಈ ಎಲ್ಲಾ ಊಹಾ ಪೋಹಗಳಿಗೆ ಸ್ಪಷ್ಟನೆ ನೀಡಿರುವ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಆ ಪತ್ರದಲ್ಲಿ ಏನಿದೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ