ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ.
ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ.
ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸುತ್ತಿರುವ ‘ಪೊಗರು’ ಚಿತ್ರಕ್ಕಾಗಿ ರಶ್ಮಿಕಾ ಮಂದಣ್ಣ, 60 ಲಕ್ಷ ಸಂಭಾವನೆ ಪಡೆದಿದ್ದು, ಇದಕ್ಕೂ ಮೊದಲು ಮೋಹಕ ತಾರೆ ರಮ್ಯ ಶಿವಣ್ಣ ನಟಿಸಿದ್ದ ಆರ್ಯನ್ ಚಿತ್ರಕ್ಕಾಗಿ 66 ಲಕ್ಷ ರೂಪಾಯಿ ಪಡೆದುಕೊಂಡಿದ್ದು ಕನ್ನಡದ ನಾಯಕಿಯರು ಪಡೆದ ಅತೀ ಹೆಚ್ಚು ಸಂಭಾವನೆಯಾಗಿತ್ತು.
ಈಗ ಕೇವಲ 80 ದಿನಗಳ ಕಾಲ ಕಾಲ್ ಶೀಟ್ ಗೋಸ್ಕರ ರಾಧಿಕಾ ದಮಯಂತಿ ಚಿತ್ರಕ್ಕಾಗಿ 1 ಕೋಟಿ ರೂ. ಪಡೆದಿದ್ದು, ಇದು ಚಂದನವನದ ನಾಯಕಿಯರಲ್ಲಿ ರಾಧಿಕಾ ಪಡೆದ ಅತೀ ಹೆಚ್ಚು ಸಂಭಾವನೆ ಎಂದು ಹೇಳಲಾಗಿದೆ.
ಹೇಗಿದೆ ನೋಡಿ ರಾಧಿಕಾ ಅಭಿನಯದ ದಮಯಂತಿ ಚಿತ್ರದ ಟೀಸರ್ ವಿಡಿಯೋ…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.