ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ.
ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇದ್ರ ಲಾಭ ಹೇಗೆ ಬಡವರಿಗೆ ಸಿಗಲಿದೆ ಎಂಬುದನ್ನು ವಿವರಿಸಿದ್ದಾರೆ.
ದೇಶದ ಬಡವರ ಖಾತೆಗೆ ಪ್ರತಿ ವರ್ಷ 75 ಸಾವಿರ ರೂಪಾಯಿ ಜಮಾ ಆಗಲಿದೆ. ದೇಶದ ಶೇಕಡಾ 20ರಷ್ಟು ಜನರು ಇದ್ರ ಲಾಭ ಪಡೆಯಲಿದ್ದಾರೆ. ಪ್ರತಿ ವ್ಯಕ್ತಿಯ ಆದಾಯವನ್ನು 12 ಸಾವಿರಕ್ಕೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಅಂದ್ರೆ ಒಬ್ಬ ವ್ಯಕ್ತಿಯ ತಿಂಗಳ ಸಂಬಳ 8 ಸಾವಿರ ರೂಪಾಯಿಯಿದೆ ಎಂದ್ರೆ ಸರ್ಕಾರ ಆತನಿಗೆ ಹೆಚ್ಚುವರಿ 4 ಸಾವಿರ ರೂಪಾಯಿ ನೀಡಲಿದೆ.
ವ್ಯಕ್ತಿ ತಿಂಗಳಿಗೆ 2 ಸಾವಿರ ರೂಪಾಯಿ ಗಳಿಸುತ್ತಿದ್ದರೆ ಸರ್ಕಾರ ಆತನಿಗೆ 10 ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಿದೆ. ರಾಹುಲ್ ಗಾಂಧಿ ಪ್ರಕಾರ, ಈ ಯೋಜನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ 72 ಸಾವಿರ ರೂಪಾಯಿ ಮೀಸಲಿಡಲಾಗುವುದು. 21ನೇ ಶತಮಾನದಲ್ಲಿ ದೇಶದಲ್ಲಿ ಬಡವರಿರಲು ಸಾಧ್ಯವಿಲ್ಲ. ಕಾಂಗ್ರೆಸ್ ಪರ ಬಡವರಿಗೆ ನೀಡ್ತಿರುವ ದೊಡ್ಡ ಉಡುಗೊರೆ ಇದು ಎಂದಿದ್ದಾರೆ ರಾಹುಲ್.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…