ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು ರಮ್ಯಾಗೆ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೇರೆಯವರಿಗೆ ವೋಟು ಮಾಡಿ ಅಂತಾ ಹೇಳೋ ಹಕ್ಕು ನಿಮಗಿಲ್ಲ. ಮೊದಲು ನೀವು ಹೋಗಿ ವೋಟ್ ಮಾಡಿ ಅಂತಾ ಕೆಲವರು ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ಹಿಂದೆ ನಡೆದ ಚುನಾವಣೆಯಲ್ಲಿ ಮತದಾನ ಮಾಡದೆ ತಪ್ಪಿಸಿಕೊಂಡ ರಮ್ಯಾರಿಂದ ಮತದಾನದ ಪಾಠ ಅಂತಾ ವ್ಯಂಗ್ಯವಾಡಿದ್ದಾರೆ. ಮತ್ತೊಂದಿಷ್ಟು ಜನ ದೆಹಲಿ ಬಿಟ್ಟು ಬಂದು ಮೊದಲು ವೋಟ್ ಮಾಡ್ರಿ, ಆಮೇಲೆ ಬೇರೆಯವರಿಗೆ ಉಪದೇಶ ಮಾಡಿ ಎಂದು ಟ್ವೀಟ್ ನಲ್ಲಿ ಕಾಲೆಳೆದಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡಿರಲಿಲ್ಲ. ಹೀಗಾಗಿ ವೋಟ್ ಮಾಡಿ ಅಂತಾ ಉಪದೇಶ ಮಾಡಲು ಬಂದ ರಮ್ಯಾ ವಿರುದ್ಧ ಟ್ವಿಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.