ಸುದ್ದಿ

9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

16

9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ.

ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು.

ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಯ ಕೀರುಚಾಟ ಕೇಳಿ ಸ್ಥಳೀಯರು ಆರೋಪಿ ಮನೆ ಬಳಿ ಬಂದಿದ್ದಾರೆ. ಆಗ ವಿಚಾರ ತಿಳಿದು ಆತನ್ನನ್ನು ಹಿಗ್ಗಾಮುಗ್ಗಾ ಹೊಡೆದು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಬಂದು ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಆರೋಪಿ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈಗಾಗಲೇ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅತ್ಯಾಚಾರದ ಪ್ರಕರಣ ಹಾಗೂ ಕೊಲೆ ಪ್ರಕರಣ ಹೀಗೆ ಘಟನೆ ಸಂಬಂಧ ಎರಡು ಬೇರೆ ಬೇರೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ