ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಭಾನುವಾರ ಸಂಜೆ ಐದು ಆರೋಪಿಗಳ ವಿರುದ್ಧ ಸಂತ್ರಸ್ತೆ ಬಂದು ದೂರು ದಾಖಲಿಸಿದ್ದಾರೆ. ಅವರ ವಿರುದ್ಧ ಗ್ಯಾಂಗ್ರೇಪ್, ದೌರ್ಜನ್ಯ ಮತ್ತು ಐಪಿಸಿ ಸೆಕ್ಷನ್ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕಿಶೋರ್ ಸಿಂಗ್ ಭಾಟಿ ಹೇಳಿದರು.
ನಾಲ್ಕು ಆರೋಪಿಗಳಾದ ಜಿತೇಂದ್ರ ಭಟ್ (20), ಗೋವಿಂದ್ ಭಟ್ (20), ದಿನೇಶ್ ಭಟ್ (24) ಮತ್ತು ಮಹೇಂದ್ರ ಭಟ್ (22) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸಂಜಯ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.ಸದ್ಯಕ್ಕೆ ಆರೋಪಿಗಳನ್ನು ವಿಚಾರಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತೆಯ ಪತಿ ಕಾರ್ಮಿಕನಾಗಿ ಕೆಲಸ ಮಾಡುತ್ತಾನೆ ಎಂದು ಭಾಟಿ ತಿಳಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…