ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ.
ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ ಮಾಡಿ, ಮರಕ್ಕೆ ಕಟ್ಟಿ ಹಾಕಿದ್ದರು. ಈ ವೇಳೆ ನಾಲ್ವರು ಸೇರಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ.
ಈ ಸಂಬಂಧ ಸಂತ್ರಸ್ತೆ ಆರೋಪಿಸಿದ್ದರೂ ಪೊಲೀಸರು ಮಾತ್ರ ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದರು ಎಂದು ವರದಿಯಾಗಿದೆ. ಆದರೆ ತಡವಾಗಿ ಸಂತ್ರಸ್ತೆ ದೂರು ಸ್ವೀಕರಿಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಸಬ್ ಇನ್ಸ್ಪೆಕ್ಟರ್ ಬ್ರಿಜೇಶ್ ಕುಮಾರ್ ಅವರು, ದಂಪತಿಗಳೇ ತಮ್ಮ ಸೆಕ್ಸ್ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ ಅತ್ಯಾಚಾರ ಸಂತ್ರಸ್ತೆಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿರಲಿಲ್ಲ. ಇದರಿಂದ ಮನನೊಂದ ಮಹಿಳೆ ಅತ್ಯಾಚಾರಕ್ಕೆ ಒಳಗಾದ ಮರುದಿನವೇ ಆತ್ಮಹತ್ಯೆಗೆ ಶರಣಾಗಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….