ಸುದ್ದಿ

ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

906

34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ. ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಆರೋಗ್ಯ

    “ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

    ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.