ನಟಿ ರಶ್ಮಿಕಾ ಮಂದಣ್ಣ ತೆಲುಗು
ನಟ ಅಲ್ಲು ಅರ್ಜುನ್ ಮತ್ತು
ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು
ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ
ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ
ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ.
ನಟ ಅಲ್ಲು ಅರ್ಜುನ್, ನಿರ್ಮಾಪಕ
ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ
ಶ್ರೀ ಪ್ರಸಾದ್ ಸೇರಿದಂತೆ ಇಡೀ
ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.
ಬೇರೆ ಸಿನಿಮಾದ ಚಿತ್ರೀಕರಣ ಇದ್ದ
ಕಾರಣ ರಶ್ಮಿಕಾ ಈ ಸಿನಿಮಾದ
ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯ ಆಗಿಲ್ಲ. ಈ
ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ
ಮೂಲಕ ಹಂಚಿಕೊಂಡಿರುವ ರಶ್ಮಿಕಾ ತಂಡಕ್ಕೆ ಕ್ಷಮೆ
ಕೇಳಿದ್ದಾರೆ. ಚಿತ್ರತಂಡದ ಜೊತೆಗೆ ಕೆಲಸ ಮಾಡಲು
ಉತ್ಸುಕನಾಗಿದ್ದೇನೆ ಎಂದಿದ್ದಾರೆ.
ಇದು ಅಲ್ಲು ಅರ್ಜುನ್ ನಟನೆಯ
20ನೇ ಸಿನಿಮಾವಾಗಿದೆ. ‘ರಂಗಸ್ಥಳಂ’ ನಂತರ ಸುಕುಮಾರ್ ಈ
ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್
ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ
ಆಗುತ್ತಿದೆ. ಮೊದಲ ಬಾರಿಗೆ ಸ್ಟೈಲಿಷ್
ಸ್ಟಾರ್ ಜೊತೆಗೆ ತೆರೆ ಹಂಚಿಕೊಳ್ಳುವ
ಅವಕಾಶ ರಶ್ಮಿಕಾಗೆ ಸಿಕ್ಕಿದೆ.
ಮತ್ತೊಂದು
ವಿಶೇಷ ಏನೆಂದರೆ, ಸಿನಿಮಾದಲ್ಲಿ ಕಾಲಿವುಡ್ ನಟ ವಿಜಯ್ ಸೇತುಪತಿ
ಖಳನಾಯಕನಾಗಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಇದೆ.
ಇತ್ತೀಚಿಗೆ ‘ಸೈರಾ ನರಸಿಂಹ ರೆಡ್ಡಿ’
ಸಿನಿಮಾದಲ್ಲಿ ನಟಿಸಿದ್ದ ವಿಜಯ್ ಸೇತುಪತಿ ಇದೀಗ
ಅಲ್ಲು ಅರ್ಜುನ್ ಜೊತೆ ನಟಿಸುವ
ಸಾಧ್ಯತೆ ಇದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.