ಸುದ್ದಿ

ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

67

ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ.

ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ ರವಿ ಚಂದ್ರನ್ ರಿಗೆ ಸಿ ಎಮ್ಆರ್ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ತಯಾರಿ ಮಾಡಿಕೊಂಡಿದೆ. ರವಿ ಚಂದ್ರನ್ ಆಪ್ತ ಮೂಲಗಳು ಈ ಸುದ್ದಿಯನ್ನು ‘ಫಿಲ್ಮಿ ಬೀಟ್ ಕನ್ನಡ’ಕ್ಕೆ ಖಚಿತ ಪಡಿಸಿದ್ದಾರೆ.

ನಿರ್ಮಾಪಕ ವೀರಾಸ್ವಾಮಿ ಪುತ್ರ ರವಿ ಚಂದ್ರನ್ 1971ರಲ್ಲಿ ಬಾಲ ನಟನಾಗಿ ‘ಕುಲ ಗೌರವ’ ಸಿನಿಮಾದಲ್ಲಿ ನಟಿಸಿದರು. ನಂತರ 1982ರಲ್ಲಿ ‘ಕದೀಮ ಕಳ್ಳರು’ಸಿನಿಮಾದ ನಿರ್ಮಾಣ ಮಾಡಿ ಒಂದು ಪಾತ್ರವನ್ನು ನಿರ್ವಹಿಸಿದರು. ‘ಪ್ರೇಮಲೋಕ’ ಚಿತ್ರದ ಮೂಲಕ ನಿರ್ದೇಶನ ಶುರು ಮಾಡಿ, ದೊಡ್ಡ ಹಿಟ್ ನೀಡಿದರು.

ಅಲ್ಲಿಂದ ಶುರುವಾದ ರವಿ ಚಂದ್ರನ್ ಪ್ರಯಾಣ ಇಂದಿಗೂ ಮುಂದುವರೆದಿದೆ. ನಟ,ನಿರ್ದೇಶಕ, ನಿರ್ಮಾಪಕ, ಗೀತಾ ರಚನೆಗಾರ, ಸಂಗೀತ ನಿರ್ದೇಶಕ, ಸಂಭಾಷಣೆಕಾರನಾಗಿ ರವಿ ಚಂದ್ರನ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.