ಸುದ್ದಿ

ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

128

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ.

ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು.

ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ ಬಳಿಕ ಪಕ್ಷೇತರ ಅಭ್ಯರ್ಥಿ ಊರು ಬಿಡುತ್ತಾರೆ. ಆ ಬಳಿಕ ದೇವೇಗೌಡ, ಕುಮಾರಸ್ವಾಮಿಯವರೇ ಮಂಡ್ಯ ಜಿಲ್ಲೆ ಜನತೆಯ ನೆರವಿಗೆ ಬರಬೇಕು ಎಂದಿದ್ದಾರೆ.

ಅಂಬರೀಶ್ ಬದುಕಿದ್ದಾಗ ಸುಮಲತಾ ಯಾವಾಗಲಾದರೂ ಮಂಡ್ಯಕ್ಕೆ ಬಂದಿದ್ದಾರಾ ಎಂದು ಪ್ರಶ್ನಿಸಿರುವ ರೇವಣ್ಣ, ಜನತೆ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…